ಹಲೋ ಸ್ನೇಹಿತರೇ, ಕರ್ನಾಟಕ ಲೋಕಸೇವಾ ಆಯೋಗದಿಂದ ಶೀಘ್ರದಲ್ಲಿಯೇ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಹೊರಬಿಳಲಿದ್ದು, ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಕೆಎಎಸ್ ಗ್ರೂಪ್ ಎ & ಬಿ ಹುದ್ದೆಗಳ ನೇಮಕಾತಿ ನಡೆಯಲಿದೆ. 300 ಕೆಎಎಸ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಆಸಕ್ತಿ ತೋರಿಸಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಶೀಘ್ರದಲ್ಲಿಯೇ ಕೆಪಿಎಸ್ಸಿಯಿಂದ ಅಧಿಸೂಚನೆ ಹೊರಬೀಳಲಿದ್ದು, ಆಸಕ್ತರು ಈಗಿನಿಂದಲೇ ಪರೀಕ್ಷೆಗಾಗಿ ಸಿದ್ದತೆ ನಡೆಸಬಹುದು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ಓದಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುವ ಕೆಎಎಸ್ ಹುದ್ದೆಗಳ ನೇಮಕಾತಿ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.
ಹುದ್ದೆಗಳ ವಿವರ:
- ಹುದ್ದೆಗಳ ಹೆಸರು: ಕೆಎಎಸ್ ಗ್ರೂಪ್ ಎ & ಬಿ
- ಹುದ್ದೆಗಳ ಸಂಖ್ಯೆ: 300 ಹುದ್ದೆಗಳು
- ಆಯ್ಕೆ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ
- ಕೆಲಸದ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.
ಇದನ್ನೂ ಸಹ ಓದಿ : ಹಳೆಯ ಪಿಂಚಣಿ ಮರು ಜಾರಿ.!! ನೌಕರರಿಗೆ ಸರ್ಕಾರದಿಂದ ಬಂತು ಮಹತ್ವದ ಉತ್ತರ
ಗರಿಷ್ಟ ಪ್ರಯತ್ನದ ಮಿತಿಗಳು:
- ಸಾಮಾನ್ಯ ಅರ್ಹತಾ ಅಭ್ಯರ್ಥಿಗಳು : ಗರಿಷ್ಟ 5 ಬಾರಿ ಪ್ರಯತ್ನಿಸಬಹುದು,
- 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳು : ಗರಿಷ್ಟ 07 ಬಾರಿ ಪ್ರಯತ್ನಿಸಬಹುದು
- ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭ್ಯರ್ಥಿಗಳು : ಪ್ರಯತ್ನಗಳ ಮಿತಿ ಇರುವುದಿಲ್ಲ.
- ಅರ್ಜಿ ಶುಲ್ಕ/ Application Fees:
- ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
- ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
- ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ: ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಳಗಿನ ಹಂತಗಳನ್ನು ನಡೆಸಲಾಗುತ್ತದೆ.
ಹಂತ 1: ಪೂರ್ವಭಾವಿ ಪರೀಕ್ಷೆ
ಹಂತ 2: ಮುಖ್ಯ ಪರೀಕ್ಷೆ
ಹಂತ 3: ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಆರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
ಇತರೆ ವಿಷಯಗಳು:
ಬಡ ಜನರಿಗೆ ಗುಡ್ ನ್ಯೂಸ್!! ಪಿಎಂ ಯೋಜನೆ ಹೊಸ ನೋಂದಣಿ ಪ್ರಾರಂಭ, ಹೀಗೆ ಲಾಭ ಪಡೆಯಿರಿ
ಪ್ರತಿ ತಿಂಗಳು ₹50,000 ಪಿಂಚಣಿ ನೀಡುವ ಹೊಸ ಯೋಜನೆ ಪ್ರಾರಂಭ..! ಇಲ್ಲಿ ನಿಮ್ಮ ಹೆಸರು ನೋಂದಾಯಿಸಿ ಪಿಂಚಣಿ ಪಡೆಯಿರಿ